ಭಜನೆ- ಸಂಗೀತದಿಂದ ಸುಸಂಸ್ಕೃತ ಸಮಾಜ ನಿರ್ಮಾಣ

10 SDP 6
Published on

ಸಿದ್ದಾಪುರ: ಅನಾದಿ ಕಾಲದಿಂದ ದೇವಾಲಯಗಳಲ್ಲಿ ನಡೆದು ಬಂದ ಭಜನೆ, ಸಂಗೀತ ಕಾರ್ಯಕ್ರಮಗಳು ಇಂದು ಕಣ್ಮರೆಯಾಗುತ್ತಿವೆ. ಸಮಾಜವನ್ನು ಸುಸಂಸ್ಕೃತವಾಗಿಡಲು ಭಜನೆ- ಸಂಗೀತ ಕಾರ್ಯಕ್ರಮಗಳು ಅನಿವಾರ್ಯವಾಗಿವೆ ಎಂದು ಬೇಡ್ಕಣಿಯ ಕೋಟೆ ಹನುಮಂತ ದೇವಾಲಯದ ಅಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಹೇಳಿದರು.

ತಾಲೂಕಿನ ಭುವನಗಿರಿ ಭುವನೇಶ್ವರಿ ದೇವಾಲಯದಲ್ಲಿ ಶನಿವಾರ ಆಯೋಜಿಸಿದ್ದ ಭಜಭುವನೇಶ್ವರಿ ಭಜನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷ ಚಂದ್ರಕಾಂತ ಹೆಗಡೆ ಗುಂಜಗೋಡು ಅಧ್ಯಕ್ಷತೆ ವಹಿಸಿದ್ದರು. ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಬಿಳಗಿ ಮಾತನಾಡಿದರು. ಸಂಘಟಕ ನಾರಾಯಣ ಹೆಗಡೆ ಕಲ್ಲಾರೆಮನೆ ಇತರರಿದ್ದರು.

ಪ್ರಶಾಂತ ಹೆಗಡೆ ಕಾಶಿಗದ್ದೆ, ಜಯರಾಮ ಭಟ್ಟ ಗುಂಜಗೋಡು, ಛಾಯಾ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. ನಂತರ ದೇವಾಲಯದಲ್ಲಿ ನಿರಂತರ ಭಜನಾ ಕಾರ್ಯಕ್ರಮ ಆರಂಭಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net