ಶರಣಸಿರಸಗಿಯಲ್ಲಿ ಭಜನಾ ಸಪ್ತಾಹ ಸಮಾರೋಪ ಇಂದು

PH 11
Published on

ಕಲಬುರಗಿ: ಶರಣಶಿರಸಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಪ್ತ ಭಜನಾ ಕಾರ್ಯಕ್ರಮ ಸೋಮವಾರ ಸಮಾರೋಪಗೊಳ್ಳಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಬೆಳಗ್ಗೆ ಶರಣಬಸವೇಶ್ವರ ದೇವರಿಗೆ ವಿಶೇಷ ಪೂಜೆ, ಅಲಂಕಾರ, ಅಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಭಕ್ತರಿಗೆ ದಾಸೋಹ ವ್ಯವಸ್ಥೆ ಕೈಗೊಳ್ಳಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶರಣಬಸವೇಶ್ವರರ ದರ್ಶನಾಶೀರ್ವಾದ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net