

ಕಾಸರಗೋಡು: ಭಜನೆಯು ಸರಳ ಸಂಕೀರ್ತನೆಯ ಭಕ್ತಿ ಮಾರ್ಗವಾಗಿದ್ದು, ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಹಾದಿಯಾಗುತ್ತದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.
ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವಠಾರದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಘಟಕ ನೇತೃತ್ವದಲ್ಲಿ ಏಕ ದಿನ ಭಜನಾ ಕಮ್ಮಟ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಪರಿಷತ್ತಿನ ಅಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಂದಾಳು ಡಾ.ಅನಂತ ಕಾಮತ್, ವಿಶ್ವ ಹಿಂದು ಪರಿಷತ್ ನಗರ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಕೋಟೆಕಣಿ, ವಕೀಲ ಗೋವಿಂದ ನಾಯರ್, ಕನ್ನಡ ಭವನದ ರೂವಾರಿ ವಾಮನ ರಾವ್ ಬೇಕಲ್, ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಅಧ್ಯಕ್ಷೆ ಸ್ವರ್ಣಗಿರಿ ಉಪಸ್ಥಿತರಿದ್ದರು.
ಭಜನಾ ಪರಿಷತ್ ಗೌರವಾಧ್ಯಕ್ಷ ಜಯಾನಂದ ಕುಮಾರ್ ಹೊಸದುರ್ಗ ಸ್ವಾಗತಿಸಿದರು. ಪೇಟೆ ವೆಂಕಟ್ರಮಣ ದೇವಸ್ಥಾನ ಉಪಾಧ್ಯಕ್ಷ ಕೆ.ಎನ್.ರಾಮಕೃಷ್ಣ ಹೊಳ್ಳ ಪ್ರಾರ್ಥನೆ ಹಾಡಿದರು. ಭಜನಾ ಪರಿಷತ್ ಮಂಜೇಶ್ವರ ತಾಲೂಕು ಸಮಿತಿ ಕಾರ್ಯದರ್ಶಿ ರಾಮಕೃಷ್ಣ ಸಂತಡ್ಕ ನಿರೂಪಿಸಿದರು. ಕಾರ್ಯದರ್ಶಿ ರೋಹಿತ್ ಆಚಾರ್ಯ ಮಧೂರು ವಂದಿಸಿದರು.