ಜ.29 ಕ್ಕೆ ರಾಜಾಂಗಣದಲ್ಲಿ ಸಹಸ್ರ ಕಂಠ ಗಾಯನ

udp-3-sahasra
Published on

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಕೃಷ್ಣಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್​ ವತಿಯಿಂದ ರಾಜಾಂಗಣದಲ್ಲಿ ಜ. 29ರಂದು ಮಧ್ಯಾಹ್ನ 3.30ರಿಂದ 'ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್​ ಹೇಳಿದರು.

ಶ್ರೀ ಪುತ್ತಿಗೆ ಮಠದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್​ ಉಡುಪಿ ತಾಲೂಕು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜ.5ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3.30ಕ್ಕೆ ರಥಬೀದಿ ಪುತ್ತಿಗೆ ಮಠದಲ್ಲಿ ನಡೆಯುವ ಭಜನಾ ತರಬೇತಿಯಲ್ಲಿ ಭಜನಾ ಮಂಡಳಿಗಳ ಸದಸ್ಯರು ಹಾಗೂ ಭಜಕರು ಭಾಗವಹಿಸಬೇಕು ಎಂದು ವಿನಂತಿಸಿದರು.

ಭಜನಾ ಪರಿಷತ್​ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್​ ಬಸ್ರೂರು ಮಾತನಾಡಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್​ ಯೋಜನಾಧಿಕಾರಿ ಸ್ವಪ್ನಾ ಪ್ರಕಾಶ್​, ಭಜನಾ ಪರಿಷತ್​ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ, ಶ್ರೀ ಪುತ್ತಿಗೆ ಮಠದ ರಘುಪತಿ ರಾವ್​ ಕಿದಿಯೂರು, ಭಜನಾ ಮಂಡಳಿಯ ಸುಮನ ಆಚಾರ್ಯ ಉಪಸ್ಥಿತರಿದ್ದರು. ಭಜನಾ ಪರಿಷತ್​ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್​ ಅಂಬಲಪಾಡಿ ಸ್ವಾಗತಿಸಿದರು. ತಾಲೂಕು ಭಜನಾ ಪರಿಷತ್​ ಉಪಾಧ್ಯಕ್ಷೆ ಸುಮಿತ್ರಾ ನಾಯ್ಕ್​ ಪೆರಂಪಳ್ಳಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net