

ಸುಬ್ರಹ್ಮಣ್ಯ: ಎಳೆಯ ಪ್ರಾಯದಲ್ಲಿ ಮಕ್ಕಳಲ್ಲಿ ಸಂಸ್ಕಾರದ ಔನತ್ಯಕ್ಕೆ ಭಜನೆ ಪೂರಕ ಎಂದು ಪ್ರಗತಿಪರ ಕೃಷಿಕ ಶಿವರಾಮಯ್ಯ ಕರ್ಮಾಜೆ ಹೇಳಿದರು.
ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಶ್ರೀ ಶಾರದಾಂಬಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡಬ ತಾಲೂಕು ಸಹಕಾರದಲ್ಲಿ 16ನೇ ವರ್ಷದ ಉಚಿತ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಶ್ರೀ ಶಾರದಾಂಬಾ ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ರಮೇಶ್, ಭಜನಾ ತರಬೇತುದಾರ ವೆಂಕಟ್ರಮಣ ಆಚಾರ್ಯ ಕಲ್ಮಡ್ಕ, ಭಜನಾ ಪರಿಷತ್ ಪಂಜ ವಲಯದ ಅಧ್ಯಕ್ಷ ಎಲ್ಯಣ್ಣ ಗೌಡ ಕಟ್ಟ, ಭಜನಾ ತರಬೇತಿ ಸಂಚಾಲಕ ಲೋಕೇಶ್ ಬರೆಮೇಲು, ಭಜನಾ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ಮೊದಲಾದವರಿದ್ದರು. ಗುರುಪ್ರಸಾದ್ ತೋಟ ಸ್ವಾಗತಿಸಿದರು. ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ನಾರಾಯಣ ಶಿರಾಜೆ ವಂದಿಸಿದರು.
70 ವಿದ್ಯಾರ್ಥಿಗಳು ಭಾಗಿ
ಶಿಬಿರದಲ್ಲಿ 70 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಪ್ರಮಾಣ ಪತ್ರ ನೀಡಲಾಯಿತು. ಭಜನಾ ಮಂಡಳಿ ಪೂರ್ವಾಧ್ಯಕ್ಷ ಬಾಲಕೃಷ್ಣ ಪುತ್ಯ ಸಹಕರಿಸಿದರು. ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆದು ಪ್ರಸಾದ ವಿತರಣೆ ನೆರವೇರಿತು. ಬಳಿಕ ಅರ್ಧ ಏಕಾಹ ಭಜನೆ ನಡೆಯಿತು. ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು.
ಗೌರವಾರ್ಪಣೆ, ಗುರುವಂದನೆ
ಮುಖ್ಯ ತರಬೇತುದಾರ ವೆಂಕಟ್ರಮಣ ಆಚಾರ್ಯ ಕಲ್ಮಡ್ಕ ಮತ್ತು ಶಿಕ್ಷಕಿ ನಳಿನಾಕ್ಷಿ ವಿ.ಆಚಾರ್ಯ ಕಲ್ಮಡ್ಕ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಗುರುವಂದನೆ ಸಮರ್ಪಿಸಿದರು. ಸಹ ತರಬೇತುದಾರರಾದ ಉಷಾ ಉಬರಡ್ಕ, ಮಹಾಲಿಂಗ ಸಂಪ, ವಿಶ್ವನಾಥ ರೈ ಅರ್ಗುಡಿ ಹಾಗೂ ಶಿಬಿರಕ್ಕೆ ಸಹಕರಿಸಿದವರನ್ನು ಸನ್ಮಾನಿಸಲಾಯಿತು.