ಭಜನೆಯಿಂದ ನೆನಪಿನ ಶಕ್ತಿ ವೃದ್ಧಿ : ನರಿಕೊಂಬು ಗ್ರಾಪಂ ಅಧ್ಯಕ್ಷ ಸಂತೋಷ್ ಅನಿಸಿಕೆ

32
Published on

ಬಂಟ್ವಾಳ: ಮಕ್ಕಳಿಗೆ ನಮ್ಮ ಮೂಲಸಂಸ್ಕಾರ ಸಂಸ್ಕೃತಿ ಜತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿ ಎಂದು ನರಿಕೊಂಬು ಗ್ರಾಪಂ ಅಧ್ಯಕ್ಷ ಸಂತೋಷ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ತುಂಬೆ ವಲಯ ವತಿಯಿಂದ ಅಂತರ ಶ್ರೀ ಕೋದಂಡರಾಮ ಭಜನಾ ಮಂಡಳಿ ಸಹಯೋಗದೊಂದಿಗೆ ಭಜನಾ ತರಬೇತಿ ಶಿಬಿರವನ್ನು ರಾಮನಗರ ಶ್ರೀ ಕೋದಂಡರಾಮ ಭಜನಾ ಮಂಡಳಿ ಸಭಾಂಗಣದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ನರಿಕೊಂಬು ಗ್ರಾಪಂ ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ಪ್ರಗತಿಪರ ಕೃಷಿಕ ಪ್ರೇಮನಾಥ್ ಶೆಟ್ಟಿ ಅಂತರ, ಕೋದಂಡರಾಮ ಭಜನಾ ಮಂದಿರ ಅಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲಾ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್ ಅಳಿಯೂರು, ಭಜನೆ ತರಬೇತುದಾರರಾದ ಸಂದೇಶ್, ಗಗನ್, ಆಕಾಶ್ ಮೊದಲಾದವರಿದ್ದರು. ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಫಲ್ಯ ಸ್ವಾಗತಿಸಿದರು. ಭಜನಾ ಮಂಡಳಿ ಸದಸ್ಯ ಗಣೇಶ್ ಕುಮಾರ್ ವಂದಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಹಾಗೂ ಪ್ರತಿಭಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net