

ಸಿರಿಗೆರೆ: ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 31ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಆರೋಗ್ಯ ಇಲಾಖೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಇರಿಸುವ ವ್ಯವಸ್ಥೆ ಮಾಡಲಾಗಿದೆ.
ಸ್ಟಾಲ್ ಒಂದನ್ನು ಹಾಕಲಿದ್ದು, ಉಚಿತ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಆಡಳಿತ ವೈದ್ಯಾಧಿಕಾರಿ ಡಾ.ತಿಮ್ಮೇಗೌಡ ಮಾತನಾಡಿ, ಬುಧವಾರದಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು,
ಸಮುದಾಯ ಆರೋಗ್ಯ ಕೇಂದ್ರದಿಂದ ಸಿಬ್ಬಂದಿಯ ತಂಡ ರಚಿಸಿ ಎಲ್ಲ ಸಮಯದಲ್ಲಿಯೂ ಸ್ಟಾಲ್‌ಗಳಲ್ಲಿ ಹಾಜರಿರಲು ಸೂಚಿಸಿದರು.
ದಂತ ವೈದ್ಯಾಧಿಕಾರಿ ಡಾ.ಬಿಂದಿಯಾ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಮೋಹನ್, ಶ್ರೀಧರ್ ಇತರರಿದ್ದರು.