ರಾಮನಾಥಪುರ ಜಾತ್ರೆಯಲ್ಲಿ ಭಕ್ತಸಾಗರ

19ark3
ಅರಕಲಗೂಡು ತಾಲೂಕಿನ ರಾಮನಾಥಪುರ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಪಾಲ್ಗೊಂಡಿದ್ದ ಅಪಾರ ಭಕ್ತರು.
Published on

ಅರಕಲಗೂಡು: ತಾಲೂಕಿನ ರಾಮನಾಥಪುರ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಅಪಾರ ಭಕ್ತರು ಭಾಗವಹಿಸಿದ್ದರು.

ಸುಕ್ಷೇತ್ರದಲ್ಲಿ ಸೋಮವಾರ ನಡೆದ ಮಹಾ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿದ್ದರು. ಮಂಗಳವಾರವೂ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಬೆಳಗಿನಿಂದಲೇ ಆಗಮಿಸಿದ ಅಪಾರ ಭಕ್ತರು ಕಾವೇರಿ ನದಿಯಲ್ಲಿ ಮಿಂದು ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಹಣ್ಣು ತುಪ್ಪ ನೈವೇದ್ಯ ಅರ್ಪಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು.

ಪ್ರಸನ್ನಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಮಹಾ ರಥೋತ್ಸವದ ನಿಮಿತ್ತ ರಾತ್ರಿ ಬೆಳ್ಳಿ ರಥದಲ್ಲಿ ಶಾಂತೋತ್ಸವ, ಪುಷ್ಪಾಂದೋಳಿಕೋತ್ಸವ ಜರುಗಿತು. ಮಂಗಳವಾರ ರಾತ್ರಿ ಶೇಷವಾಹನೋತ್ಸವ ನೆರವೇರಿತು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net