ಭಕ್ತಿ, ಶ್ರದ್ಧೆಯಿಂದ ಶಿವ ಧ್ಯಾನದಲ್ಲಿ ತಲ್ಲೀನ

08-03-Shiva-4
ಮಹಾ ಶಿವರಾತ್ರಿ ನಿಮಿತ್ತ ರಾಯಚೂರಿನ ಡ್ಯಾಡಿ ಕಾಲನಿಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಈಶ್ವರ ಲಿಂಗಕ್ಕೆ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಗಿತ್ತು.
Published on

ರಾಯಚೂರು: ಮಹಾ ಶಿವರಾತ್ರಿ ನಿಮಿತ್ತ ಜಿಲ್ಲೆಯಾದ್ಯಂತ ಭಕ್ತಿ, ಶ್ರದ್ಧೆಯಿಂದ ಜನರು ಶುಕ್ರವಾರ ಶಿವಧ್ಯಾನದಲ್ಲಿ ತಲ್ಲೀನರಾಗಿದ್ದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿದ್ದು, ಜನರು ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಪುನೀತರಾದರು.
ನಗರದ ಚಂದ್ರವೌಳೇಶ್ವರ ದೇವಸ್ಥಾನ, ನಂದೀಶ್ವರ ದೇವಸ್ಥಾನ, ನಗರೇಶ್ವರ ದೇವಸ್ಥಾನ, ರಾಮಲಿಂಗೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಈಶ್ವರನಿಗೆ ಅಭಿಷೇಕ, ಹೋಮ, ಹವನಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಗ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಬಿಸಿಲಿನ ಪ್ರಖರತೆ ಹೆಚ್ಚಾಗಿರುವ ಕಾರಣ ದೇವಸ್ಥಾನಗಳ ಮುಂದೆ ನೆರಳಿನ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಹಣ್ಣು ಹಂಪಲು ಹಾಗೂ ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net