ಡಾ.ಪಟ್ಟದ್ದೇವರ ಸಮಾಜಸೇವೆ ಮಾದರಿ

25blk 01
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ೭೪ನೇ ಜನ್ಮದಿನ ನಿಮಿತ್ತ ಉಭಯ ಪೂಜ್ಯರನ್ನು ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಸನ್ಮಾನಿಸಿ ಗೌರವಿಸಿದರು. ಹಣಮಂತರಾವ ಚವ್ಹಾಣ್, ಶಶಿಧರ ಕೋಸಂಬೆ, ಸಂಗಮೇಶ ಹುಣಜೆ ಮದಕಟ್ಟಿ ಇತರರಿದ್ದರು.
Published on

ಭಾಲ್ಕಿ: ಗಡಿ ಭಾಗದಲ್ಲಿ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಿರಿಯ ಸ್ವಾಮೀಜಿ, ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ೭೪ನೇ ಜನ್ಮದಿನ ನಿಮಿತ್ತ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೂಜ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ, ಪ್ರಸಾರಕ್ಕೆ ಮುಡಿಪಾಗಿಟ್ಟಿದ್ದಾರೆ ಎಂದು ಬಣ್ಣಿಸಿದರು.

ವಿಶ್ವಗುರು ಬಸವಣ್ಣನವರ ಮತ್ತು ಲಿಂಗೈಕ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ತತ್ವ ಸಿದ್ಧಾಂತಗಳನ್ನು ಪೂಜ್ಯರು ಚಾಚೂತಪ್ಪದೆ ಪಾಲಿಸುತ್ತಿದ್ದಾರೆ. ಕರ್ನಾಟಕವಷ್ಟೇ ಅಲ್ಲ, ನೆರೆಯ ಆಂಧ್ರ, ಮಹಾರಾಷ್ಟ್ರ, ತೆಲಂಗಾಣ ಸೇರಿ ದೇಶ-ವಿದೇಶಗಳಲ್ಲಿ ಪೂಜ್ಯರು ಬಸವತತ್ವ ಪ್ರಸಾರ ಕೈಗೊಂಡು ಬಸವಾದಿ ಶರಣರ ಸಂದೇಶಗಳನ್ನು ಜನಮಾನಸಕ್ಕೆ ಮುಟ್ಟಿಸುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ. ಅವರ ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ. ಪೂಜ್ಯರ ಸಂಕಲ್ಪ ಈಡೇರಿಸಲು ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಹಿರೇಮಠ ಸಂಸ್ಥಾನ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಸಂಸದ ಸಾಗರ್ ಖಂಡ್ರೆ, ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ, ಉದ್ಯಮಿ ಜಯರಾಜ ಖಂಡ್ರೆ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ ಮದಕಟ್ಟಿ ಇತರರಿದ್ದರು.

ಅನುಭವ ಮಂಟಪ ಸದಸ್ಯತ್ವ ಹೆಚ್ಚಿಸುವ ಗುರಿ: ಬಸವಕಲ್ಯಾಣ ಅನುಭವ ಮಂಟಪದಲ್ಲಿ ನಿರಂತರ ದಾಸೋಹ ನಡೆಸಲು ಸದಸ್ಯತ್ವ ಹೆಚ್ಚಿಸುವ ಗುರಿ ತಮ್ಮದಾಗಿದೆ ಎಂದು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ನಾನು ಯಾವತ್ತೂ ಸನ್ಮಾನ, ಪ್ರಶಸ್ತಿ, ಜನ್ಮದಿನ ಆಚರಣೆಗೆ ಆಸೆಪಟ್ಟವನಲ್ಲ. ಆದರೆ ಅನುಭವ ಮಂಟಪದಲ್ಲಿ ನಿರಂತರ ದಾಸೋಹಕ್ಕಾಗಿ ೧೧,೦೦೦, ೨೫,೦೦೦, ೫೦,೦೦೦, ೧,೦೦,೦೦೦ ರೂ. ಮೊತ್ತದ ಸದಸ್ಯತ್ವ ಮಾಡಿಕೊಳ್ಳುತ್ತಿದ್ದು, ಆಸಕ್ತ ಭಕ್ತರು ತಮ್ಮ ಆರ್ಥಿಕತೆಗೆ ಅನುಗುಣವಾಗಿ ಸದಸ್ಯತ್ವ ಪಡೆದು ಸಹಕರಿಸಬೇಕು ಎಂದು ಕೋರಿದರು. ಸಮಾಜದಲ್ಲಿ ಮಾಡಬೇಕಿರುವುದು ಬಹಳಷ್ಟಿದೆ. ಬಸವಣ್ಣನವರ ಮತ್ತು ಲಿಂಗೈಕ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ಆಶೀರ್ವಾದ ಶಕ್ತಿಯಿಂದ ಸಮಾಜದಲ್ಲಿ ಒಂದಿಷ್ಟು ಉತ್ತಮ ಸೇವೆ ಸಲ್ಲಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಮಾರ್ಗದರ್ಶನದಲ್ಲಿ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಆಗುತ್ತಿದ್ದು, ೨೦೨೫ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ.
| ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net