

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವ ವೇದಿಕೆಯ 13ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಉಮೇಶ್ ಭಂಡಾರಿ ಅಧ್ಯಕ್ಷತೆಯಲ್ಲಿ ಪಣೆಜಾಲಿನಲ್ಲಿ ಇತ್ತೀಚೆಗೆ ನಡೆಯಿತು.
ಬೆಳಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಅಧ್ಯಕ್ಷ ಲಕ್ಷ್ಮಣ ಕರಾವಳಿ ಉದ್ಘಾಟಿಸಿದರು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಮುನಿಯಾಲ್, ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ, ‘ಭಂಡಾರಿ ಸಂಜೀವಿನಿ’ ಯೋಜನೆ ಲೋಕಾರ್ಪಣೆಗೊಳಿಸಿದರು.
ಉದ್ಯಮಿ ಅಮಿತ ಅಶೋಕ್ ಗುಂಡ್ಯಲ್ಕೆ, ಸಂಘದ ಅಧ್ಯಕ್ಷ ಎಸ್.ಉಮೇಶ್ ಭಂಡಾರಿ, ಉದ್ಯಮಿ ಪ್ರವೀಣ್ ಭಂಡಾರಿ ವೇಣೂರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಸ್ವಾಗತಿಸಿದರು. ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲ್ಕೆ ವರದಿ ವಾಚಿಸಿದರು. ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ವಂದಿಸಿದರು. ಜತೆ ಕಾರ್ಯದರ್ಶಿ ನಾರಾಯಣ ಬಿಕುಂಡದಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಮಹಾಸಭೆಯ ಬಳಿಕ ತಾಲೂಕಿನ ವಿವಿಧ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಕ್ರಮ ನಡೆಯಿತು.
ಅನಾರೋಗ್ಯದಿಂದ ಬಳಲುತ್ತಿರುವ ಪ್ರವೀಣ್ ಭಂಡಾರಿ ದೇರಾಜೆ ಅವರ ಚಿಕಿತ್ಸೆಗಾಗಿ 10 ಸಾವಿರ ರೂ. ಸಹಾಯಧನವನ್ನು ಭಂಡಾರಿ ಸಂಜೀವಿನಿ ಯೋಜನೆ ಮೂಲಕ ನೀಡಲಾಯಿತು. ಸಂಘದ ಸ್ವಂತ ಕಟ್ಟಡಕ್ಕೆ ಹತ್ತು ಸೆಂಟ್ಸ್ ಜಾಗ ಕೊಡುಗೆ ನೀಡಿದ ಶಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಲಾಯಿತು.