ಭರಚುಕ್ಕಿ, ಹೊಗೇನಕಲ್‍ಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಆದೇಶ ಹಿಂದಕ್ಕೆ : ಡಿಸಿ ಆದೇಶ

gaganachukki-bharachukki-falls
Published on

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೇನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧ ಹೊರಡಿಸಲಾಗಿದ್ದ ಆದೇಶವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.


ಕೇರಳ ರಾಜ್ಯದ ವೈನಾಡು ಪ್ರದೇಶ, ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿರುವುದರಿಂದ ಕಾವೇರಿ ಹಾಗೂ ಕಬಿನಿ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೇನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧ ಹೊರಡಿಸಲಾಗಿದ್ದ ಆದೇಶವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯವರು ಇಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net