ಸುಳ್ಳಿನ ಸರಮಾಲೆ ಸರ್ಕಾರ

CHANDRAPPA BN MP (2)
Published on

ಭರಮಸಾಗರ: ಕೇಂದ್ರ, ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯವಾಗಿದ್ದು, ಸುಳ್ಳಿನ ಸರಮಾಲೆ ಹೆಣೆಯುತ್ತಿವೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಆರೋಪಿಸಿದರು.

ಗ್ರಾಮದ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣದ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರದ ನಿರಂತರ ತಪ್ಪುಗಳ ಕುರಿತು ಜನರಿಗೆ ಕಾರ್ಯಕರ್ತರು ತಿಳಿಸಬೇಕು ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಪಂಚಾಯಿತಿ ಮಟ್ಟದಲ್ಲಿ ನೇರ ಪ್ರಸಾರವಾಗುವ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣವನ್ನು ಅಂತರ ಕಾಯ್ದುಕೊಂಡು ವೀಕ್ಷಿಸಬೇಕು ಎಂದರು.

ಚಿತ್ರದುರ್ಗ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಬರುವ ಚುನಾವಣೆಗಳಲ್ಲಿ ಇದನ್ನು ಸಾಬೀತುಪಡಿಸಬೇಕು ಎಂದು ತಿಳಿಸಿದರು.

ಜು.2ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಲಿದ್ದು, ಹೋಬಳಿಯ 10 ಗ್ರಾಪಂಗಳಲ್ಲಿ ಇದರ ನೇರ ಪ್ರಸಾರಕ್ಕೆ ಅವಕಾಶವಿದೆ. ಎಲ್ಲರೂ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಪಕ್ಷದ ಸ್ಥಳೀಯ ಮುಖಂಡ ಎಚ್.ಎನ್.ತಿಪ್ಪೇಸ್ವಾಮಿ, ವೆಂಕಟೇಶ್, ತುರುವನೂರು ಮಲ್ಲೇಶ್, ಬಿ.ಓಬಜ್ಜ, ಬಿ.ಎಸ್.ಚನ್ನೇಶ್, ಎನ್.ಎಚ್.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net