ಅಪಘಾತದಲ್ಲಿ ಸಾಯುವವರ ಸಂಖ್ಯೆ ಹೆಚ್ಚಳ

BRM HELMET 03 (1)
Published on

ಭರಮಸಾಗರ: ಭಾರತದಲ್ಲಿ ರೋಗ ರುಜನಗಳಿಂದ ಮೃತರಾಗುವವರಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಪಿಎಸ್‌ಐ ರಾಜು ವಿಷಾದಿಸಿದರು.

ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಹೆಲ್ಮೆಟ್, ರಸ್ತೆ ಸುರಕ್ಷತಾ ಕ್ರಮಗಳ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ. ಜೀವ ರಕ್ಷಣೆಗಾಗಿ ಹೆಲ್ಮೆಟ್ ಧರಿಸಲಿ ಎಂಬ ಉದ್ದೇಶಕ್ಕೆ ದಂಡ ವಿಧಿಸಲಾಗುತ್ತಿದೆ. ಈ ವಿಚಾರವನ್ನು ಎಲ್ಲರೂ ಅರಿಯಬೇಕು ಎಂದರು.

ಪೊಲೀಸರು ಹೆಲ್ಮೆಟ್ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net