ಕಾಂಗ್ರೆಸ್ ದೂಷಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ; ಮಾಜಿ ಸಚಿವ ಎಚ್.ಆಂಜನೇಯ

Bharamasagara, Anjaneya, Amrita Mahotsava,
Published on

ಭರಮಸಾಗರ: ಬಿಜೆಪಿಯವರಿಗೆ ಕಾಂಗ್ರೆಸ್ ಅನ್ನು ದೂಷಿಸುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ಸಿಗರು ಒಗ್ಗಟ್ಟಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಸ್ವಾತಂತ್ರೃ ಅಮೃತ ಮಹೋತ್ಸವ ಹಾಗೂ ಸಿದ್ದರಾಮೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರ ಅವಶ್ಯಕತೆ ಇದೆ. ಅವರ ಕೆಲಸಗಳು ಎಲ್ಲ ವರ್ಗದ ಜನರಿಗೆ ತಲುಪಿವೆ. ಈ ಕಾರಣ ಎಲ್ಲ ಕಾರ್ಯಕರ್ತರೂ ದಾವಣಗೆರೆಗೆ ಆ.3ರಂದು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಬೆಂಗಳೂರಲ್ಲಿ ನಡೆಯುವ ಆ.15ರ ಸ್ವಾತಂತ್ರ್ಯ ಸಂಭ್ರಮೋತ್ಸವದಲ್ಲೂ ಪಾಲ್ಗೊಳ್ಳಬೇಕು ಎಂದು ಕರೆ ಕೊಟ್ಟರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಸಾಸಲು ಸತೀಶ್ ಮಾತನಾಡಿ, ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ಕ್ಷೇತ್ರದ ಜನರೊಂದಿಗೆ ಮಾತನಾಡಬೇಕು. ದೇಶದಲ್ಲಿ ಬಡವರು ನೆಮ್ಮದಿಯಿಂದ ಬದುಕಬೇಕು. ಮತ್ತೊಮ್ಮೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು ಎಂದರು.

ಹಳೆಯ ರಂಗಾಪುರದ ಅವಿನಾಶ್, ಸಿರಿಗೆರೆಯ ಶಶಿಕುಮಾರ್ ಸೇರಿ ನೂರಾರು ಸಂಖ್ಯೆಯಲ್ಲಿ ಪಕ್ಷದ ಇತರ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net