ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ

BRM veershiva lingayath 20
Published on

ಭರಮಸಾಗರ: ರಾಜ್ಯ ವೀರಶೈವ ಲಿಂಗಾಯತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವೀರಶೈವ ಯುವ ವೇದಿಕೆ ಪದಾಧಿಕಾರಿಗಳು ನಾಡಕಚೇರಿ ಉಪ ತಹಸೀಲ್ದಾರ್ ಪರಶುರಾಮ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯವನ್ನು ಅಲ್ಪಸಂಖ್ಯಾತರೆಂದು ಘೋಷಿಸಿದಂತೆ ನಮ್ಮನ್ನೂ ಅಲ್ಪಸಂಖ್ಯಾತರೆಂದು ಪರಿಗಣಿಸಬೇಕು. ಸಮುದಾಯಕ್ಕೆ ಇಲ್ಲಿನ ಸರ್ಕಾರಗಳು ಆದ್ಯತೆ ನೀಡದೆ ವಂಚನೆ ಮಾಡುತ್ತಿವೆ. ಯುವಕರು ಉದ್ಯೋಗ ವಂಚಿತರಾಗಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.

ಸಮಗ್ರ ಅಭಿವೃದ್ಧಿಗೆ ಸಮುದಾಯಕ್ಕಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಉದ್ಯೋಗ, ಶಿಕ್ಷಣ, ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನಾ ಕಾರ್ಯದರ್ಶಿ ಎಚ್.ಎನ್.ಪ್ರವೀಣ್, ತಾಲೂಕು ಅಧ್ಯಕ್ಷ ಬಿ.ಟಿ.ನಿರಂಜನ್, ಪ್ರತಾಪ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net