

ಭರಮಸಾಗರ: ಮುನ್ನೆಚ್ಚರಿಕೆ ಕ್ರಮವಾಗಿ ಹೋಬಳಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಚುನಾವಣಾ ಬ್ಲಾಕ್ ಅಧಿಕಾರಿ, ಕಿರಿಯ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ಆರಂಭಿಸಿದ್ದಾರೆ.
ಪ್ರತಿ ಮನೆಗೆ ಭೇಟಿ ನೀಡುತ್ತಿರುವ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಿಬ್ಬಂದಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಸಂಪರ್ಕಿಸುವ ಕೆಲಸ ಮಾಡುತ್ತಿದ್ದಾರೆ.
ಕಿರಿಯ ಆರೋಗ್ಯ ಸಹಾಯಕರ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಸಮೀಕ್ಷೆ ನಡೆಸಲಾಗುತ್ತಿದೆ. ಬ್ಲಾಕ್ ಚುನಾವಣಾಧಿಕಾರಿ ರಾಜೂನಾಯ್ಕ, ಕಿರಿಯ ಆರೋಗ್ಯ ಸಹಾಯಕಿ ರಜಿಯಾ ಬೇಗಂ, ಆಶಾ ಕಾರ್ಯಕರ್ತೆರಾದ ಶೈಲಾ, ಮಂಜುಳಾ, ವಿಶಾಲಾಕ್ಷಿ ಇತರರಿದ್ದರು.