ಮಂಡ್ಯ ನಗರದಲ್ಲಿ ಭಾರತ್ ಜೋಡೋ ಸಂಭ್ರಮಾಚರಣೆ: ಕಾಂಗ್ರೆಸ್ ಕಾರ್ಯಕರ್ತರಿಂದ ಮೆರವಣಿಗೆ

2
Published on

ಮಂಡ್ಯ: ಭಾರತ್ ಜೋಡೋ ಯಾತ್ರೆಗೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ಸಂಜೆ ಸಂಭ್ರಮಾಚರಣೆ ಮಾಡಲಾಯಿತು.

ನಗರದ ಬಂದೀಗೌಡ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನದಲ್ಲಿರುವ ಗಾಂಧಿಪ್ರತಿಮೆಯ ಬಳಿ ತೆರಳಿ ಸಂಭ್ರಮಿಸಿದರು.

ಬಳಿಕ ರವಿಕುಮಾರ್ ಗಣಿಗ ಮಾತನಾಡಿ, ರಾಹುಲ್ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಆಚರಿಸಲಾಗಿದೆ. ದೇಶ ಉಳಿಸುವ ಕರೆಗೆ ನಾವೆಲ್ಲ ಒಗ್ಗೂಡಿ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಸಾಗುವಂತೆ ಮಾಡಲಾಗಿತ್ತು ಎಂದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಮುಖಂಡರಾದ ಪ್ರಶಾಂತ್‌ಬಾಬು, ಅಜ್ಜಹಳ್ಳಿ ರಾಮಕೃಷ್ಣ, ತ್ಯಾಗರಾಜ್, ವಿಜಯಲಕ್ಷ್ಮೀ ರಘುನಂದನ್, ಹನ್ಸಿಯಾಭಾನು, ಸಿ.ಆರ್.ರಮೇಶ್, ಸಿ.ಎಂ.ದ್ಯಾವಪ್ಪ, ವಿಜಯ್‌ಕುಮಾರ್, ರುದ್ರಪ್ಪ, ದೀಪಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net