

ಚಿಕ್ಕಮಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ವಿಚ್ಛಿದ್ರಕಾರಕ ಶಕ್ತಿಗಳಿಂದ ಒಡೆದು ಹೋಗಿರುವ ದೇಶದ ಜನರ ಮನಸ್ಸುಗಳನ್ನು ಜೋಡಿಸುವ ಕೆಲಸ ಮಾಡುತ್ತಿದ್ದು ದೇಶದಲ್ಲೆಡೆ ವ್ಯಾಪಕ ಜನಸ್ಪಂದನೆ ದೊರೆಯುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಬಣ್ಣಿಸಿದರು.
ನಗರದ ಕ್ಯಾಥೋಲಿಕ್ ಕ್ಲಬ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್‌ನಿಂದ ನಡೆದ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಾತ್ರೆ ಮೂಲಕ ದೇಶದಲ್ಲಿ ಮಕ್ಕಳು, ಯುವಜನರು, ವಿದ್ಯಾರ್ಥಿಗಳು, ಹಿರಿಯರು, ಚಿಂತಕರು ಸೇರಿದಂತೆ ಎಲ್ಲ ವರ್ಗಗಳ ಜನರು ಒಟ್ಟುಗೂಡುತ್ತಿದ್ದಾರೆ. ಒಡೆದಿರುವ ಜನರ ಮನಸ್ಸುಗಳನ್ನು ಜೋಡಿಸುವ ಈ ಯಾತ್ರೆ ಇತಿಹಾಸದ ಪುಟ ಸೇರಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಪಕ್ಷದ ಕಾರ್ಯಕರ್ತರು ಮತ್ತು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಚಿಂತಕರು, ಯುವ ಜನರೊಂದಿಗೆ ಸಮಾಲೋಚನೆ ನಡೆಸಬೇಕು. ಜಿಲ್ಲಾ ಕಾಂಗ್ರೆಸ್‌ನ ಪ್ರತಿ ಬ್ಲಾಕ್‌ಗಳಲ್ಲಿ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೊಸೆಸ್, ಪ್ರಸನ್ನ, ಜಿಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಧ್ರುವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಚಂದ್ರಮೌಳಿ, ಕಲ್ಲೇಶ್, ಾರೂಕ್, ನಟರಾಜ್, ಜಿಪಂ ಮಾಜಿ ಸದಸ್ಯ ಆದಿಲ್, ಮುಖಂಡರಾದ ಬಿ.ಎಚ್.ಹರೀಶ್, ದೋರನಾಳು ಪರಮೇಶ್, ಗೋಪಿಕೃಷ್ಣ, ದರ್ಶನ್, ಚಂದ್ರಪ್ಪ, ಶಬೀರ್, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್‌ಕುಮಾರ್ ಇದ್ದರು.