ಶಿಕ್ಷಣ ಕ್ಷೇತ್ರದಲ್ಲಿ ಸ್ಕೌಟ್ಸ್-ಗೈಡ್ಸ್ ಉತ್ತಮ ಕಾರ್ಯ : ವಾರ್ಷಿಕ ಮಹಾಸಭೆ, ಪುನಚ್ಚೇತನ ಶಿಬಿರದಲ್ಲಿ ಲಿಲ್ಲಿ ಪಾಯಸ್ ಹೇಳಿಕೆ

06
Published on

ವಿಜಯವಾಣಿ ಸುದ್ದಿಜಾಲ ಗುರುಪುರ

ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದ್ದು, ಸಂಸ್ಥೆಯಿಂದ ಸ್ಥಳೀಯ ಮಟ್ಟದಲ್ಲಿ ಇನ್ನೂ ಹೆಚ್ಚಿನ ಕೆಲಸಗಳು ನಡೆಯುವಂತಾಗಲಿ ಎಂದು ದಕ್ಷಿಣ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಹೇಳಿದರು.

ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯದ ಸಭಾಗೃಹದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗುರುಪುರ ಸ್ಥಳೀಯ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪುನಚ್ಚೇತನ ಶಿಬಿರ ಶನಿವಾರ ಮಾತನಾಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗುರುಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷ ಶೋಹನ್ ಅತಿಕಾರಿ, ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಜಿ. ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ತರಬೇತಿ ಆಯುಕ್ತೆ ಗೈಡ್ ಜಯಶ್ರೀ, ಶುಭೋದಯ ವಿದ್ಯಾಲಯದ ಉಪಪ್ರಾಂಶುಪಾಲ ಗೋಪಾಲಕೃಷ್ಣ ಭಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬಗ್ಗೆ ಮಾತನಾಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕೋಶಾಧಿಕಾರಿ ಸುನಿಲ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಸ್ವರ್ಣಲತಾ ಸ್ಥಳೀಯ ಸಂಸ್ಥೆಯ ವತಿಯಿಂದ 2025-26ನೇ ಸಾಲಿನಲ್ಲಿ ಯೋಜಿತ ಕಾರ್ಯಕ್ರಮಗಳ ಪಟ್ಟಿ ವಾಚಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಗುರುಪುರ ಸರ್ಕಾರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಜಯಲಕ್ಷ್ಮೀ ಹಾಗೂ ಭಾರತ್ ಸ್ಕೌಟ್ಸ್-ಗೈಡ್ಸ್‌ನ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಭವ್ಯಾ ಜಿ. ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಸಂಸ್ಥೆ ಜತೆ ಕಾರ್ಯದರ್ಶಿ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ವಂದಿಸಿದರು.

ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಸಂಸ್ಥೆಯ ಪಾತ್ರ ಮಹತ್ತರವಾದುದು. ಇಲ್ಲೂ ಮೂಡುಬಿದಿರೆಯಲ್ಲಿ ನಡೆದ ‘ಜಾಂಬೂರಿ’ ಕಾರ್ಯಕ್ರಮ ಆಯೋಜಿಸುವ ಸಲಹೆ ಉತ್ತಮವಾಗಿದೆ. ಆ ಬಗ್ಗೆ ಎಲ್ಲರೂ ಸೇರಿ ಚರ್ಚಿಸೋಣ. ಶೋಹನ್ ಅತಿಕಾರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗುರುಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net