ಪಿಇಎಸ್ ವಿವಿಯಲ್ಲಿ ಜ.3ರಿಂದ 4 ದಿನ ಭಾರತ್ ಅನ್‌ಲೀಸ್ಡ್ ವಿಚಾರ ಸಂಕಿರಣ

pes
Published on

ಬೆಂಗಳೂರು ಪಿಇಎಸ್ ಶಿಕ್ಷಣ ಸಂಸ್ಥೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜ.3ರಿಂದ 6ರ ವರೆಗೆ ‘ಭಾರತ್ ಅನ್‌ಲೀಸ್ಡ್’ ಎಂಬ ಹೆಸರಿನಲ್ಲಿ ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ.

4 ದಿನಗಳ ಕಾರ್ಯಕ್ರಮದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದೆ. ಬನಶಂಕರಿ 3ನೇ ಹಂತದಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಸಮ ಕುಲಾಧಿಪತಿ ಪ್ರೊ. ಜವಾಹರ್ ದೊರೆಸ್ವಾಮಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ದಿನ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ಸಂಸದ ತೇಜಸ್ವಿ ಸೂರ್ಯ, ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಆನಂದ ರಾಘುನಾಥನ್, ವಂದೇ ಮಾತರಂ ರೈಲಿನ ಹಿಂದಿನ ರೂವಾರಿ ಸುಧಾಂಶು ಮಣಿ, ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ಸಂಜೀವ್ ಸನ್ಯಾಳ್ ಸೇರಿ ಹಲವು ಉದ್ಯಮಿಗಳು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು

ಪ್ರತಿ ದಿನ ರಾತ್ರಿ 7.30ರಿಂದ ಹೆಸರಾಂತ ಗಾಯಕರಾದ ಕೈಲಾಸ್ ಖೇರ್, ಸುರ್ ಸಂಧ್ಯಾ ಮತ್ತು ಶಂಕರ್ ಮಹದೇವನ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net