

ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪದ್ಮಭೂಷಣ ಡಾ.ವೆಂಕಟಲಕ್ಷ್ಮಮ್ಮ ನೃತ್ಯ ಪರಂಪರೆಯ ಭರತನಾಟ್ಯ ವೈಶಿಷ್ಟೃದ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್ ಬೆಟ್ಟಕೋಟೆ ಚಾಲನೆ ನೀಡಿದರು. ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ನೀಡಿದ ನಿರ್ದೇಶಕರಾದ ಕಲಾಶ್ರೀ ವಿದ್ವಾನ್ ಡಿ.ಕೇಶವ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂತ್ರಜ್ಞಾನಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಪ್ರಾಚೀನ ಕಲೆ ಮರೆಯುತ್ತಿದ್ದಾರೆ. ಇದರಿಂದ ಪ್ರಾಚೀನ ಕಲೆಗಳು ನಶಿಸಿ ಹೋಗುತ್ತಿದ್ದು ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಲಯದ ಕುಲಸಚಿವೆ ಕೆ.ಎಸ್.ರೇಖಾ, ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು.