’ಭಾರತ್ ಜೋಡೋ’ ಪಾದಯಾತ್ರೆಗೆ ಜಿಲ್ಲೆಯಿಂದ ೫ ಸಾವಿರ ಕಾರ್ಯಕರ್ತರು

MDK03
Published on

ಮಡಿಕೇರಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ’ಭಾರತ್ ಜೋಡೋ’ ಪಾದಯಾತ್ರೆ ಅ೧ ರಂದು ನಂಜನಗೂಡು ವ್ಯಾಪ್ತಿಯ ಕಳಲೆ ಗೇಟ್ ಬಳಿ ಆಗಮಿಸಲಿದ್ದು, ಕೊಡಗಿನಿಂದ ಸುಮಾರು ೫ ಸಾವಿರ ಕಾರ್ಯಕರ್ತರು ಪಾಲ್ಗೊಂಡು ಸ್ವಾಗತಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಂ.ಲಕ್ಷ್ಮಣ್ ತಿಳಿಸಿದರು.


ಸೆ.೭ ರಿಂದ ಭಾರತ್ ಜೋಡೊ ಆರಂಭವಾಗಿದೆ. ಕರ್ನಾಟಕದಲ್ಲಿ ಸೆ೩೦ ರಂದು ಗುಂಡ್ಲುಪೇಟೆ ಮೂಲಕ ಆರಂಭಗೊಳ್ಳಲಿದೆ. ರಾಜ್ಯದ ೮ ಜಿಲ್ಲೆಗಳಲ್ಲಿ ೨೧ ದಿನಗಳ ಕಾಲ, ೫೧೦ ಕಿಮೀ ಪಾದಯಾತ್ರೆ ನಡೆಸಲಿದ್ದು, ಸುಮಾರು ೧ ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಕೊಡಗಿನ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿಗಳು ಇರಲಿದೆ. ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಪಕ್ಷಾತೀತವಾಗಿ ನಡೆಯಲಿದೆ. ವಿವಿಧ ಸಂಘಟನೆಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಪಾದಯಾತ್ರೆ ಶುರುವಾದ ನಂತರ ಮೈಮೇಲೆ ಚೇಳು ಬಿಟ್ಟುಕೊಂಡಂತೆ ಅಮಿತ್ ಷಾ ಸೇರಿದಂತೆ ಬಿಜೆಪಿ ಮುಖಂಡರು ಆಡುತ್ತಿದ್ದಾರೆ. ಆರ್‌ಎಸ್‌ಎಸ್ ಮುಖಂಡರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ಒಂದು ಕಡೆ ನಡುಕ ಶುರುವಾಗಿದೆ. ರಾಹುಲ್ ಗಾಂಧಿ ಏನೇನೂ ಅಲ್ಲ ಎಂದ ಮೇಲೆ ಅವರ ಬಗ್ಗೆ ಏಕೆ ಚಿಂತೆ ಎಂದು ಪ್ರಶ್ನಿಸಿದರು.


ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ವಕ್ತಾರ ಟಿ.ಇ.ಸುರೇಶ್, ಡಿಸಿಸಿ ಸದಸ್ಯ ಗಂಗಧರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net