ಗಲಭೆ ಸೃಷ್ಟಿಸುವವರು ಸಿಎಂಗೆ ಶಾಂತಿದೂತರು : ಡಾ.ಭರತ್ ಶೆಟ್ಟಿ ಟೀಕೆ

bharath shetty
Published on

ಗುರುಪುರ: ಗಣೇಶೋತ್ಸವ ಸಂದರ್ಭ ಮದ್ದೂರು ಸಹಿತ ವಿವಿಧೆಡೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತದಿಂದ ಹಿಂದುಗಳ ಧಾರ್ಮಿಕ ಭಾವನೆಗೆ ನೋವು ಉಂಟಾಗಿದ್ದು, ಗಲಭೆ ಉಂಟು ಮಾಡುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಂತಿದೂತರಂತೆ ಕಂಡು ಬರುತ್ತಿದ್ದಾರೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಹಿಂದುಗಳ ಹಬ್ಬ, ಮೆರವಣಿಗೆ ಮೇಲೆ ಪೊಲೀಸ್ ಇಲಾಖೆಯ ಮೂಲಕ ಕಾಂಗ್ರೆಸ್ ಸರ್ಕಾರ ಅಂಕುಶ ಹೇರುತ್ತಿದೆ. ಕಾನೂನು ಪಾಲಿಸಿ ಹಬ್ಬ ಆಚರಿಸಿದರೆ ಸಿಎಂ ಶಾಂತಿದೂತರು ಕಾನೂನು ಕೈಗೆತ್ತಿಕೊಂಡು ಗಲಭೆ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಕೈಕಟ್ಟಿ ಹಾಕಿದೆ. ಪೊಲೀಸ್ ಠಾಣೆ, ಪೊಲೀಸರ ಮೇಲೆ ದಾಳಿ ನಡೆದರೂ ಪೊಲೀಸರು ಮೂಕಪ್ರೇಕ್ಷಕರಂತೆ ಇರುತ್ತಾರೆ. ಸರ್ಕಾರದ ಪಕ್ಷಪಾತ, ಮೃದು ಧೋರಣೆಯಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಜನರೇ ಕಾನೂನು ಕೈಗೆತ್ತಿಕೊಳ್ಳಲು ಕಾರಣವಾಗುತ್ತಿದೆ ಎಂದರು.

ಮತಾಂಧ ದುಷ್ಕರ್ಮಿಗಳ ಮೇಲೆ ವೋಟ್ ಬ್ಯಾಂಕ್, ಅಲ್ಪಸಂಖ್ಯಾತರ ಓಲೈಕೆಯಿಂದ ಸರ್ಕಾರ ಕಾನೂನು ಕ್ರಮಕ್ಕೆ ಹಿಂದೇಟು ಹಾಕುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದು ಹಬ್ಬಗಳು, ಗಣೇಶೋತ್ಸವ ಮೆರವಣಿಗೆ ನೆಮ್ಮದಿಯಿಂದ ಆಚರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಡಾ.ಭರತ್ ಶೆಟ್ಟಿ ಮಂಗಳೂರು ಉತ್ತರ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net