

ಮಡಿಕೇರಿ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಚೆರಿಯಮನೆ ಭಾರ್ಗವರವರು ನೇಮಕಗೊಂಡಿದ್ದಾರೆ.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯಾಧ್ಯಕ್ಷ ಸಿ.ನಾರಾಯಣ ಸ್ವಾಮಿ, ಸಂಚಾಲಕರಾದ ವಿಜಯ ಸಿಂಗ್‌ರವರ ನಿರ್ದೇಶನದ ಮೇರೆಗೆ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸರವರ ಶಿಫಾರಸ್ಸಿನ ಮೇರೆಗೆ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನರವರು ನೇಮಕಗೊಳಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ದರ್ಮಜ ಉತ್ತಪ್ಪ, ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಂಚಾಯತ್ ವ್ಯವಸ್ಥೆಗೆ ತಿದ್ದುಪಡಿ ತಂದು ದೇಶದ ಬದಲಾವಣೆಗೆ ಕಾರಣರಾದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಘಟಕರು ಪಂಚಾಯತ್ ವ್ಯವಸ್ಥೆಯಲ್ಲಿ ಹಾಲಿ, ಮಾಜಿ ಸದಸ್ಯರುಗಳ ಮನವೊಲಿಕೆ ಮೂಲಕ ಪಕ್ಷದ ಬೆಳವಣಿಗೆಗೆ ಅವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರೆ ನೀಡಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನ, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಡಿಸಿಸಿ ಸದಸ್ಯರಾದ ಟಿ.ಪಿ.ನಾಣಯ್ಯ, ನಾಪೊಕ್ಲು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಕೆ.ಎಂ.ಬಷೀರ್ ಉಪಸ್ಥಿತರಿದ್ದರು.