ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ತಂಡ ಪ್ರಥಮ

 ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆಯಿತು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆಯಿತು.
Published on

ಶನಿವಾರಸಂತೆ: ಗುಡುಗಳಲೆ ಜಾತ್ರಾ ಮೈದಾನದಲ್ಲಿ 81ನೇ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಅಂಗವಾಗಿ ಕಬಡ್ಡಿ ಪಂದ್ಯಾವಳಿ ಸಮಿತಿಯಿಂದ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆಯಿತು.

ಅಂತೆಯೇ ಗೋಪಾಲಪುರ ರೋಹಿತ್ ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಹಾಗೂ ಕಿತ್ತೂರು ಬಾಯ್ಸ ತಂಡತೃತೀಯ ಸ್ಥಾನ ಪಡೆಯಿತು.

ಶನಿವಾರಸಂತೆ ಮತ್ತು ಗೌಡಳ್ಳಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಆದರ್ಶ್ ಮತ್ತು ಪ್ರವೀಣ್ ಕಬಡ್ಡಿ ಪಂದ್ಯಾಟ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಬಡ್ಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ವಿನಯ್, ಕಾರ್ಯದರ್ಶಿ ಉಷಾ, ಉದ್ದೇಮಿಗಳಾದ ಮಧು ಬಾಗೇರಿ, ಸುದರ್ಶನ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net