

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.
ಮಂಗಳೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ- ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಮಹಾಪ್ರಬಂಧ ಸಲ್ಲಿಸಿದ್ದರು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ, ಉಜಿರೆ ಕಾಲೇಜಿನಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಮತ್ತು ಶ್ರೀಕ್ಷೇತ್ರ ಧರ್ಮಸ್ಥಳದ ಮಹತ್ವದ ಕಾರ್ಯಕ್ರಮಗಳ ಸಂದರ್ಭ ಪ್ರಚಾರ ಸಮಿತಿಯ ಮೇಲುಸ್ತುವಾರಿ ನಿರ್ವಹಿಸಿದ್ದಾರೆ.