

ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಾದ- ಪ್ರತಿವಾದ ಮಂಗಳವಾರ ಪೂರ್ಣಗೊಂಡಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ಘೋಷಿಸಿದೆ. 2021 ಮಾ.30 ರಿಂದ ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದರು. ಬಳಿಕ ಆರೋಪಿ ಪರ ವಕೀಲರು ಪ್ರತಿವಾದ ಮಂಡಿಸಿದ್ದರು. ಪ್ರಕರಣದ ಪ್ರಮುಖ ಆರೋಪಿ, ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಈಗಾಗಲೇ ಜಾಮೀನು ದೊರೆತಿದೆ. ಪುತ್ರ ನವನೀತ್ ಶೆಟ್ಟಿ ಮತ್ತು ನಂದಳಿಕೆಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷೃನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ರಾಘವೇಂದ್ರ ಎಂಬುವರು ಜಾಮೀನು ಪಡೆದುಕೊಂಡಿದ್ದಾರೆ.
2016 ಜುಲೈ 28ರಂದು ಮಧ್ಯಾಹ್ನ 3ಕ್ಕೆ ಇಂದ್ರಾಳಿ ಮನೆಯಲ್ಲಿ ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ, ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ್ ಭಟ್ ಮನೆಯ ಹೋಮ ಕುಂಡದಲ್ಲಿ ಸುಡಲಾಗಿತ್ತು. ಜು.31ರಂದು ಭಾಸ್ಕರ ಶೆಟ್ಟಿ ತಾಯಿಯು, ಪುತ್ರ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆದ ಬಳಿಕ ಕೊಲೆಯಾಗಿರುವುದು ಬೆಳಕಿಗೆ ಬಂದಿತ್ತು. ಆ.7ರಂದು ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಮತ್ತು ಆ.8 ರಂದು ನಿರಂಜನ್ ಭಟ್‌ನನ್ನು ಪೊಲೀಸರು ಬಂಧಿಸಿದ್ದ