ಭಟ್ಕಳ: ಬಿಜೆಪಿ ಭಟ್ಕಳ ಮಂಡಲದ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ನಾಯ್ಕ ಆಯ್ಕೆಯಾಗಿದ್ದಾರೆ.
ಪಟ್ಟಣದ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಬುಧವಾರ ಜಿಲ್ಲಾ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕ ಭಾಸ್ಕರ್ ದೈಮನೆ ಅವರ ಸಮ್ಮುಖದಲ್ಲಿ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಅವರು ಆಯ್ಕೆ ಪ್ರಕ್ರಿಯೆ ನಡೆಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ, ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಶ್ರೀಧರ್ ನಾಯ್ಕ, ಸಾಮಾಜಿಕ ಜಾಲತಾಣ ಸಂಚಾಲಕ ಪಾಂಡುರಂಗ ನಾಯ್ಕ ಇತರರು ಇದ್ದರು.