

ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಹಬ್ಬ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಗುರುವಾರ ಸಂಜೆ ಮೂರ್ತಿ ವಿಸರ್ಜಿಸುವ ಮೂಲಕ ಸಂಪನ್ನಗೊಂಡಿತು.
ಧಾರಕಾರವಾಗಿ ಮಳೆ ಸುರಿಯುತ್ತಿದ್ದರೂ, ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ದೇವಿಯ ಮೂರ್ತಿಯನ್ನು ನಗರದ ಮಾರಿಗುಡಿಯಿಂದ ಸಾವಿರಾರು ಭಕ್ತರು, ಸ್ವಯಂ ಸೇವಕರು, ಆಡಳಿತ ಮಂಡಳಿ ಸದಸ್ಯರುಗಳು ಸೇರಿ ಜಾಲಿಕೋಡಿಯ ಸಮುದ್ರ ತೀರಕ್ಕೆ ಒಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಿದರು.
ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪರಮೇಶ್ವರ ನಾಯ್ಕ, ಶ್ರಿಧರ ನಾಯ್ಕ, ಶ್ರೀಪಾದ ಕಂಚುಗಾರ, ನಾರಾಯಣ ಖಾರ್ವಿ ಮಾದೇವ ಮೊಗೇರ, ರಘುವೀರ ಬಾಳಗಿ, ದಿನೇಶ ನಾಯ್ಕ, ಕೃಷ್ಣ ನಾಯ್ಕ, ನಾರಾಯಣ ಖಾರ್ವಿ, ಗೋವಿಂದ ನಾಯ್ಕ, ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.