

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಕ್ತಾರೆ ಹಾಗೂ ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಭವ್ಯಾ ನರಸಿಂಹಮೂರ್ತಿ ದೇಶದ ಟೆರಿಟರಿಯಲ್ ಆರ್ಮಿಗೆ ನಿಯೋಜನೆಗೊಂಡಿದ್ದಾರೆ.
ಕಾಂಗ್ರೆಸ್‌ನ ವಕ್ತಾರೆಯಾಗಿ ಜನರಿಗೆ ಪರಿಚಯರಾಗಿದ್ದ ಭವ್ಯಾ ನರಸಿಂಹಮೂರ್ತಿ ಈಗ ಲೆಫ್ಟಿನೆಂಟ್ ಭವ್ಯಾ ನರಸಿಂಹ ಮೂರ್ತಿಯಾಗಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡಿದ್ದಾರೆ.