ಮಹದೇಶ್ವರನ ಸನ್ನಿಧಿಯಲ್ಲಿ ಭೀಮನ ಅಮಾವಾಸ್ಯೆ ಪೂಜೆ

Oplus_0
Oplus_0
Published on

ಯಳಂದೂರು: ತಾಲೂಕಿನ ಕೆಸ್ತೂರು ಗ್ರಾಮದ ಮಹದೇಶ್ವರ ದೇಗುಲದಲ್ಲಿ ಗುರುವಾರ ಭೀಮನ ಅಮಾವಾಸ್ಯೆ ಪ್ರಯುಕ್ತ ನಡೆದ ಪೂಜೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಗ್ರಾಮದ ಮಧ್ಯ ಭಾಗದಲ್ಲಿರುವ ಐತಿಹಾಸಿಕ ಮಹದೇಶ್ವರ ದೇಗುಲದಲ್ಲಿ ಬೆಳಿಗ್ಗೆಯಿಂದಲೇ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆ ಕೈಂಕರ್ಯಗಳು ನಡೆದವು. ಹಬ್ಬದ ಪ್ರಯುಕ್ತ ದೇಗುಲವನ್ನು ತಳಿರು ತೋರಣ, ವಿದ್ಯುತ್ ದೀಪಗಳು ಹಾಗೂ ಹೂವಿನಿಂದ ವಿಶೇಷ ಅಲಂಕರಿಸಲಾಗಿತ್ತು.

ಹತ್ತಾರು ವರ್ಷಗಳಿಂದಲೂ ಪ್ರತಿ ವರ್ಷವೂ ಭೀಮನ ಅಮಾವಾಸ್ಯೆ ದಿನದಂದು ಸುತ್ತಮುತ್ತಲ ತಾಲೂಕು ಹಾಗೂ ಗ್ರಾಮಗಳಿಂದ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಗುರುವಾರವೂ ಇಲ್ಲಿ ಭಕ್ತಸಾಗರವೇ ನೆರೆದಿತ್ತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net