ಸರ್ಕಾರಿ ಕಾರ್ಯಕ್ರಮ ಆಯೋಜನೆ ತಿಳಿದಿಲ್ಲವೇ?

Published on

ಕೊಟ್ಟೂರು: ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಾಜಿ ಶಾಸಕ ಭೀಮಾನಾಯ್ಕ ಅವರ ಬ್ಯಾನರ್‌ಗಳನ್ನು ನೋಡಿ ಶಾಸಕ ನೇಮಿರಾಜ್ ನಾಯ್ಕ ಕೆಂಡಾಮಂಡಲರಾದರು.

ಸರ್ಕಾರಿ ಕಾರ್ಯಕ್ರಮ ಹೇಗೆ ಆಯೋಜನೆ ಮಾಡಬೇಕೆಂಬ ಕನಿಷ್ಠ ಜ್ಞಾನ ನಿಮಗಿಲ್ಲವೇ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸರುಲ್ಲಾ ಮತ್ತು ತಹಸೀಲ್ದಾರ್ ಜಿ.ಕೆ.ಅಮರೇಶ ವಿರುದ್ಧ ಸಾರ್ವಜನಿಕವಾಗಿಯೇ ಹರಿಹಾಯ್ದರು. ಈ ಬ್ಯಾನರ್‌ಗಳನ್ನು ತಕ್ಷಣ ತೆಗೆದು ಹಾಕಬೇಕು ಇಲ್ಲದಿದ್ದರೆ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹಠಹಿಡಿದರು. ಸಂಸದ ಈ.ತುಕಾರಾಮ್ ಮಾತನಾಡಿ, ಇದರಿಂದ ನನಗೆ ತುಂಬಾ ಮುಜುಗರವಾಯಿತು. ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಹೇಳಿದರು. ಇನ್ನು ಮುಂದೆ ಹೀಗಾದರೆ ನಾನು ಯಾವ ಕಾರ್ಯಕ್ರಮಕ್ಕೂ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net