ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಹಂಗಾಮು ಆರಂಭ, ಕಬ್ಬಿನ ದರ ಟನ್‌ಗೆ ರೂ.2700 ನಿಗದಿ

BHEEMASHANKAR FACTORY
ಮರಗೂರಿನಲ್ಲಿರುವ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ.
Published on

ಇಂಡಿ: ಜಿಲ್ಲೆಯ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಗಳಲ್ಲೊಂದಾದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮು ಆರಂಭಗೊಳ್ಳಲಿದ್ದು, ಟನ್ ಕಬ್ಬಿಗೆ 2700 ರೂಪಾಯಿ ದರ ನಿಗದಿಗೊಳಿಸಲಾಗಿದೆ.

ನ. 13ರಿಂದ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಆರಂಭಗೊಂಡಿದೆ. ಈ ಹಂಗಾಮಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಪ್ರತಿ ಟನ್‌ಗೆ 3231 ರೂಪಾಯಿ ಇದ್ದು, ಇದಕ್ಕಿಂತ ಹೆಚ್ಚುವರಿಯಾಗಿ ಕಬ್ಬು ಕಟಾವು ಹಾಗೂ ಸಾಗಾಣಿಕೆ ವೆಚ್ಚ ಹೊರತುಪಡಿಸಿ (ಎಕ್ಸ್ ಫೀಲ್ಡ್) ಪ್ರತಿ ಟನ್ ಕಬ್ಬಿಗೆ 2700 ರೂಪಾಯಿ ಹಾಗೂ ಪ್ರತಿ ಟನ್ ಗೆ ಅರ್ಧ ಕಿಲೋ ಸಕ್ಕರೆಯನ್ನು ರಿಯಾಯಿತಿ ದರದಲ್ಲಿ ಕೊಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ರೈತರು ಪೂರೈಸಿದ ಕಬ್ಬಿನ ಬಿಲ್ ತೀವ್ರ ಗತಿಯಲಿ ಪಾವತಿಸಲಾಗುವುದು. ಹೀಗಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬುಯ ಪೂರೈಸುವ ಮೂಲಕ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಯಶಸ್ವಿಗೊಳಿಸಬೇಕೆಂದು ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ಯಶವಂತರಾಯಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net