ಭೀಮನಬೀಡು ಪಿಡಿಒ ಅಮಾನತು

16-GPT-2 SREENIVAS
Published on

ಗುಂಡ್ಲುಪೇಟೆ: ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಬೋಯಲ್ ನಾರಾಯಣರಾವ್ ಆದೇಶ ಹೊರಡಿಸಿದ್ದಾರೆ.

2017ರಿಂದ 19ವರೆಗೆ 9.54 ಲಕ್ಷ ರೂ. ಹಣ ದುರುಪಯೋಗ ಆಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಿಇಒ ಆದೇಶ ಹೊರಡಿಸಿದ್ದಾರೆ. 14ನೇ ಹಣಕಾಸು ಆಯೋಗದ ಅನುದಾನದಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗಿಲ್ಲ. 2017-18 ನೇ ಸಾಲಿನಲ್ಲಿ 3.70 ಲಕ್ಷ ರೂ.ಗಳನ್ನು ಯಾರಿಗೆ, ಯಾವ ಉದ್ದೇಶಕ್ಕೆ ಪಾವತಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ.

2018-19 ನೇ ಸಾಲಿನಲ್ಲಿ ಮಂಜು ಎಂಬುವರ ಹೆಸರಿನಲ್ಲಿ ಯಾವುದೇ ಪೂರಕ ದಾಖಲೆಗಳಿಲ್ಲದೆಯೇ 5.84 ಲಕ್ಷ ರೂ. ಡ್ರಾ ಮಾಡಲಾಗಿದೆ. 2017-18 ಹಾಗೂ 2018-19 ಸಾಲಿನಲ್ಲಿ ನಿಯಮಬಾಹಿರವಾಗಿ 9.38 ಲಕ್ಷ ರೂ.ಗಳನ್ನು ವೇತನ ಹಾಗೂ ಇತರ ವೆಚ್ಚಗಳಿಗೆ ಉಪಯೋಗಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭೀಮನಬೀಡು ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕಡಬೂರು ಮಂಜುನಾಥ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಪಿಡಿಒ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದೆ.

ನಿಯಮಬಾಹಿರವಾಗಿ 9.38 ಲಕ್ಷ ರೂ.ಗಳನ್ನು ವೇತನ ಹಾಗೂ ಇತರ ವೆಚ್ಚಗಳಿಗೆ ಉಪಯೋಗಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಭೀಮನಬೀಡು ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕಡಬೂರು ಮಂಜುನಾಥ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಪಿಡಿಒ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net