

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನ್ಯಾಯವಾದಿ, ಸಾಮಾಜಿಕ ಸುಧಾರಕ ಹಾಗೂ ಆರ್ಥಿಕ ತರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅಂತಹ ಮಹನೀಯರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಸಂಗನಬಸವ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ಹೇಮಂತ ಕೃಷ್ಣ ಹೇಳಿದರು.
ತಾಲೂಕಿನ ಕವಲಗಿ ಗ್ರಾಮದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಅಸಮಾನತೆಯ ವಿರುದ್ಧ, ಹಿಂದುಳಿದ ಸಮುದಾಯಗಳ, ಮಹಿಳೆಯರ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದವರು ಎಂದರು.