

ಸುಳ್ಯ: ಸರ್ಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿಪೂಜೆ ಆ.18ರಂದು ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಅಮೃತ ಮಹೋತ್ಸವದ ಲೋಗೋವನ್ನು ಮಾಜಿ ಸಚಿವ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು.
ಅಮೃತ ಮಹೋತ್ಸವದ ಮನವಿ ಪತ್ರವನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರಧ್ವಾಜ್ ಬಿಡುಗಡೆ ಮಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿ ಸಂಟನಾ ಕಾರ್ಯದರ್ಶಿ ಕೆ.ಎಂ.ಮುಸ್ತಫ ಜನತಾ, ಕೋಶಾಧಿಕಾರಿ ಅಶೋಕ್ ಪ್ರಭು, ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಎಸ್ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಹಿರಿಯ ವಿದ್ಯಾರ್ಥಿ ಸಂದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನಪಂ ಸದಸ್ಯ ಡೇವಿಡ್ ಧೀರ ಕ್ರಾಸ್ತ, ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಅಮೃತ ಮಹೋತ್ಸವ ಸಮಿತಿ ಸದಸ್ಯರಾದ ಡಾ.ರಂಗಯ್ಯ, ಚಂದ್ರಶೇಖರ ಪೆರಾಲು, ಡಾ.ಎನ್.ಎ.ಜ್ಞಾನೇಶ್, ಇಂಜಿನಿಯರ್ ವಿಜಯ ಕುಮಾರ್ ಉಬರಡ್ಕ, ನವೀನ್ ಸೋಮಯಾಗಿ, ಡಿ.ಎಸ್.ಗಿರೀಶ್, ಗೋಕುಲ್ದಾಸ್, ಲೋಕಯ್ಯ ಗೌಡ ಅತ್ಯಾಡಿ, ಶಶಿಧರ ರೈ ಪಡ್ಪು, ಎಸ್ಡಿಎಂಸಿ ಉಪಾಧ್ಯಕ್ಷ ಹಸೈನಾರ್ ಜಯನಗರ ಮೊದಲಾದವರಿದ್ದರು.
ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ನಿರೂಪಿಸಿದರು. ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ ವಂದಿಸಿದರು.