ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ
Published on

ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಹಳೆಯೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನೂತನವಾಗಿ ನಿರ್ಮಿಸಲು ಪಶು ಸಂಗೋಪನ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ನಂತರ ಬೈಲುಕುಪ್ಪೆ ಖಾಸಗಿ ಕಲ್ಯಾಣ ಮಂಟಪದ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.

ಬೈಲುಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಮಾತನಾಡಿ ಬೈಲುಕುಪ್ಪೆ ಒಂದನೇ ಕ್ಯಾಂಪಿನ ಮುಖ್ಯರಸ್ತೆಯ ಲೋಕ ಉಪಯೋಗಿ ಇಲಾಖೆಗೆ ಸೇರಿದ ಫುಟ್ಬಾತ್ ಜಾಗದಲ್ಲಿ ಅಲ್ಲಿಯ ಕೆಲ ನಿವಾಸಿಗರು ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದರು. ದಲೈಲಾಮ ಬರುತ್ತಾರೆ ಎಂದು ಪೊಲೀಸ್ ಇಲಾಖೆ ಸಹಕಾರ ಪಡೆದು ಅಲ್ಲಿಯ ಕೆಲವು ಟಿಬೇಟಿಯನ್ ವ್ಯಾಪಾರಸ್ಥರನ್ನು ತೆರವುಗೊಳಿಸಿ ನಂತರ ಆ ಜಾಗಕ್ಕೆ ಬೇಲಿ ಹಾಕಿಕೊಳ್ಳಲಾಗಿದೆ. ಇದರಿಂದ ಸಾರ್ವಜನಿಕ ವಾಹನಗಳು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.

ಸಾರ್ವಜನಿಕರ ದೂರಿನ ಮೇರೆಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಚರ್ಚಿಸಿ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೂ ಕೂಡ ಕ್ರಮವಹಿಸಿಲ್ಲ ಎಂದು ದೂರಿದರು. ಸ್ಥಳದಲ್ಲೇ ಇದ್ದ ಲೋಕೋಪಯೋಗಿ ಅಧಿಕಾರಿ ವೆಂಕಟೇಶ್ ಅವರನ್ನು ಸ್ಥಳಕ್ಕೆ ಕರೆಸಿದ ಸಚಿವರು ಕೂಡಲೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.

ತಾಲೂಕು ಗ್ಯಾರೆಂಟಿ ಯೋಜನೆ ಸಮಿತಿಯ ಅಧ್ಯಕ್ಷ ನಿತಿನ್ ಕೆ ವೆಂಕಟೇಶ್, ರೆಹಮದ್ ಜಾನ್ ಬಾಬು, ಬಸವರಾಜ್, ತಹಸೀಲ್ದಾರ್ ನಿಸರ್ಗಪ್ರಿಯ, ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್, ಸೋಮಯ್ಯ, ಜಯಂತಿ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಲಿಜಬತ್, ಪಿಡಿಒ ಬೋರೇಗೌಡ ಕಾರ್ಯದರ್ಶಿ ಕುಮಾರ್, ನಿಸಾರ್ ಅಹ್ಮದ್, ಹರೀಶ್, ಗೀತಾ ಸುಬ್ರಹ್ಮಣ್ಯ, ರಾಮಣ್ಣ, ಸುಬ್ರಹ್ಮಣ್ಯ, ಧನರಾಜ್ ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net