1.40 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ

22 njd news 01
ನಂಜನಗೂಡು ತಾಲೂಕು ಕೆರೆಹುಂಡಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಚಾಲನೆ ನೀಡಿದರು. ಶಾಸಕ ಕಳಲೆ ಕೇಶವಮೂರ್ತಿ, ಕುರಹಟ್ಟಿ ಮಹೇಶ್, ಶ್ರೀಕಂಠ ನಾಯಕ, ಗುರುಮಲ್ಲಪ್ಪ, ವಿಜಯ್‌ಕುಮಾರ್, ಮಹೇಶ್, ಎಇಇ ರಾಜು, ಶೋಭಾ, ಮಾದಪ್ಪ, ಕುಳ್ಳಯ್ಯ, ಸುರೇಶ್ ಇತರರು ಇದ್ದರು.
Published on

ನಂಜನಗೂಡು: ತಾಲೂಕಿನ ಹಲವು ಗ್ರಾಮಗಳಲ್ಲಿ 1.40 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿಪೂಜೆ ನೆರವೇರಿಸಿದರು.

ಮಸಗೆ, ಏಚ್ಚಗುಂಡ್ಲಾ, ಕೆರೆಹುಂಡಿ, ಮುದ್ದಹಳ್ಳಿ, ನವಿಲೂರು, ಹೊಸಪುರ, ಸೂರಹಳ್ಳಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿ ಹಾಗೂ ಸಮುದಾಯ ಭವನಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ 20 ಕೋಟಿ ರೂ. ವಿಶೇಷ ಅನುದಾನ ನೀಡಿದ್ದಾರೆ. ಹಂತ ಹಂತವಾಗಿ ಅನುದಾನ ನೀಡುತ್ತಿರುವುದರಿಂದ ನಿರಂತರವಾಗಿ ತಾಲೂಕಿನಲ್ಲಿ ಭೂಮಿ ಪೂಜೆಗಳನ್ನು ನೆರವೇರಿಸಿಕೊಂಡು ಬರುತ್ತಿದ್ದೇವೆ. ಚುನಾವಣೆಗೂ ಮುಂಚೆ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಇದರ ಜತೆಗೂ ಅಭಿವೃದ್ಧಿ ಕಾರ್ಯಗಳನ್ನು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುರಹಟ್ಟಿ ಮಹೇಶ್, ಶ್ರೀಕಂಠ ನಾಯಕ, ಗುರುಮಲ್ಲಪ್ಪ, ವಿಜಯ್ ಕುಮಾರ್, ಮಹೇಶ್, ಎಇಇ ರಾಜು, ಶೋಭಾ, ಮಾದಪ್ಪ, ಕುಳ್ಳಯ್ಯ, ಸುರೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net