

ವಿಜಯಪುರ : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
2023&24ನೇ ಸಾಲಿನ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ 5 ಕೋಟಿ ರೂ. ಅನುದಾನದಲ್ಲಿ ಯೋಗ ಕೇಂದ್ರ ನಿರ್ಮಾಣ, ತರಗತಿ ಕೊಠಡಿ, ಶೌಚಗೃಹ ಬ್ಲಾಕ್ ಸೇರಿದಂತೆ ಮುಂತಾದ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ನಂತರ ಶಾಸಕ ಯತ್ನಾಳ, ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ವೀಣೆ ಮಾಡಿದರು.