ಮೂಲಸೌಕರ್ಯ ಕಲ್ಪಿಸಲು ಮುತುವರ್ಜಿ...

Yashpal
Published on

ಶಾಸಕ ಯಶ್​ಪಾಲ್​ ಸುವರ್ಣ ಭರವಸೆ

ಮಾರುತಿ ನಗರ ರಸ್ತೆ ಅಭಿವೃದ್ಧಿಗೆ ಚಾಲನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಮಾರುತಿ ನಗರ ನಾಗರಿಕರ ಬೇಡಿಕೆಯ ಮೇರೆಗೆ ನಗರಸಭೆಯ ವತಿಯಿಂದ 60 ಲಕ್ಷ ರೂ. ಅನುದಾನ ಒದಗಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶೆಟ್ಟಿಬೆಟ್ಟು ವಾರ್ಡ್​ಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದು ಶಾಸಕ ಯಶ್​ಪಾಲ್​ ಸುವರ್ಣ ಭರವಸೆ ನೀಡಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡ್​ನ ಮಾರುತಿ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಏ.4ರಂದು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಸದಸ್ಯರಾದ ಅಶ್ವಿನಿ ಅರುಣ, ಸುಮಿತ್ರಾ ನಾಯಕ, ಹರೀಶ ಶೆಟ್ಟಿ ಅಂಬಲಪಾಡಿ, ಗಿರಿಧರ ಆಚಾರ್ಯ ಕರಂಬಳ್ಳಿ, ಸ್ಥಳೀಯ ಮುಖಂಡರಾದ ದುರ್ಗಾದಾಸ ರೈ, ದಿವಾಕರ ಶೆಟ್ಟಿ, ಅಕ್ಷಿತ ಶೆಟ್ಟಿ, ವಾಸುದೇವ ಶೆಣೈ, ಕೃಷ್ಣ ಆಚಾರ್ಯ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net