ಸಮುದಾಯ ಭವನಕ್ಕೆ ಜಾಗ ನೀಡಿ

web 3
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರತೀಯ ಭೋವಿ ಸಮಾಜದವರಿಗೆ ಸಮುದಾಯ ಭವನ, ಶಾಲೆ ನಿರ್ವಣಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ಶಾಸಕ ಸಿ.ಟಿ ರವಿ ಅವರಿಗೆ ಸಮಾಜದ ಜಿಲ್ಲಾಧ್ಯಕ್ಷ ಬಿ.ಟಿ.ಚಂದ್ರಶೇಖರ್ ಸೋಮವಾರ ಮನವಿ ಸಲ್ಲಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಭೋವಿ ಸಮಾಜದವರು ವಾಸವಾಗಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಯಾವುದೇ ಮಠ, ಮಂದಿರಗಳು, ಸಮುದಾಯ ಭವನಗಳು ಇಲ್ಲ. ಜತೆಗೆ ಜಿಲ್ಲೆಯಲ್ಲಿ ಸಮುದಾಯ ಏಳಿಗೆಗಾಗಿ ಕೇಂದ್ರ ಭವನ ನಿರ್ವಿುಸಲು ಸರ್ಕಾರದಿಂದ ಭೂಮಿ ಮಂಜೂರು ಮಾಡಿಲ್ಲ. ಸಮಾಜದ ಅಭಿವೃದ್ಧಿಗಾಗಿ ಪ್ರತಿ ತಾಲೂಕಿನಲ್ಲೂ ತಲಾ 2 ಎಕರೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು.

ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲೆ ಹಾಗೂ ಹಾಸ್ಟೆಲ್ ನಿರ್ವಣಕ್ಕೆ 10 ಎಕರೆ ಭೂಮಿ ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ಭೋವಿ ಜನಾಂಗ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net