ಭಾಷೆ ಉಳಿಸಿಕೊಳ್ಳುವುದೇ ದೊಡ್ಡ ಸಮಸ್ಯೆ : ಪತ್ರಕರ್ತ ಅಜಿತ್ ಹನುಮಕ್ಕನವರ್ ಅಭಿಪ್ರಾಯ

Published on

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ

ಭಾಷೆ, ಸಂಸ್ಕೃತಿ ಉಳಿವಿಗೆ ಸರ್ಕಾರ ಸಹಾಯ ಮಾಡುತ್ತದೆ ಎಂಬುದು ಭ್ರಮೆ. ಸರ್ಕಾರಗಳಿಗೆ ಅವನ್ನು ಉಳಿಸುಕೊಳ್ಳುದೇ ದೊಡ್ಡ ಸಮಸ್ಯೆಯಾಗಿದೆ. ಕನ್ನಡ ಭಾಷೆ ಉಳಿದಿದೆ ಅಂದರೆ ಅದು ಜನಸಾವಾನ್ಯರಿಂದ ವಾತ್ರ ಎಂದು ಪತ್ರಕರ್ತ ಅಜಿತ್ ಹನುಮಕ್ಕನವರ್ ಹೇಳಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸಮೂಹ ವಿದ್ಯಾ ಸಂಸ್ಥೆಗಳ ಸಂಯೋಜನೆಯಲ್ಲಿ ನಾಲ್ಕನೇ ವರ್ಷದ ಭ್ರಮ ಇಂಚರ ನುಡಿಹಬ್ಬ ಕಾರ್ಯಕ್ರಮದಲ್ಲಿ ಶಾಲಾ ವಾರ್ಷಿಕ ಸಂಚಿಕೆ ಭ್ರಮರವಾಣಿ ಮತ್ತು ಇಂಚರ ಬಿಡುಗಡೆಗೊಳಿಸಿ ಮಾತನಾಡಿದರು.

ಸಮ್ಮೇಳಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಚನ ನೀಡಿದರು. ವಿಸ್ತರಿತ ಶ್ರೀ ವಿದ್ಯಾ ಸಭಾಭವನದ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಯನ್ನು ಉದ್ಯಮಿ ಎ.ಜೆ.ಶೆಟ್ಟಿ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಸ್ತು ಪ್ರದರ್ಶನ ಉದ್ಘಾಟಿಸಿದರು. ಎಂ.ಆರ್.ಪಿ.ಎಲ್. ವಾನವ ಸಂಪನ್ಮೂಲ ಅಧಿಕಾರಿ ಸ್ಟೀವನ್ ಪಿಂಟೋ ಧ್ವಜಾರೋಹಣ ನೆರವೇರಿಸಿದರು.

ಪ್ರಮುಖರಾದ ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ನಾಡೋಜ ಕೆ.ಪಿ.ರಾವ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲಿಯಾನ್ ಕೊಂಡೇಲ, ಕಿರಣ್ ಕುವಾರ್ ಶೆಟ್ಟಿ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಸರೋಜಿನಿ, ಚಂದ್ರಶೇಖರ ಭಟ್, ರಾಜಶೇಖರ ಎನ್., ಗಿರೀಶ್ ತಂತ್ರಿ, ಕುಸುವಾವತಿ ಎನ್., ಡಾ.ವಿಜಯ್ ವಿ. ಮತ್ತಿತರರು ಉಪಸ್ಥಿತರಿದ್ದರು.

ಗಮನ ಸೆಳೆದ ಸ್ಟಾಲ್‌ಗಳು

ನುಡಿಹಬ್ಬದ ಪ್ರಯುಕ್ತ ವಿವಿಧ ಸ್ಟಾಲ್‌ಗಳು ಜನರ ಗಮನ ಸೆಳೆದಿದ್ದು, ವಿವಿಧ ಬಗೆಯ ಪುಸ್ತಕಗಳು, ಅಂಚೆ ಚೀಟಿ ಪ್ರದರ್ಶನ, ಅಂಚೆ ಇಲಾಖೆಗೆ ಸಂಬಂಧಪಟ್ಟ ವಾಹಿತಿಗಳು ಸಾಹಿತ್ಯಾಸಕ್ತರ ಗಮನ ಸೆಳೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net