ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅದ್ದೂರಿ ಆಚರಣೆ: ಎಡಿಸಿ

bhramashree narayana guru jayanti meeting koppal adc siddarameshwar
Published on

ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಆ.20ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು.

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆ.8ರಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಸಮಾರಂಭವನ್ನು ಆ.20ರಂದು ಬೆಳಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ವಿಶೇಫಿ ಉಪನ್ಯಾಸ ಜರುಗಲಿದೆ. ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಆಚರಿಸುವಂತೆ ಇಲಾಖೆಗಳು ಕ್ರಮ ಕೈಗೊಳ್ಳಬೇಕು. ಶಿಫಿ್ಠಾಚಾರದಂತೆ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಹಾಗೂ ಮೆರವಣಿಗೆಗಾಗಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಆಗಮಿಸುವಂತೆ ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎ.ಬಸವರಾಜ, ಸಮಾಜದ ಮುಖಂಡರಾದ ಈರಣ್ಣ ಹುಲಿಗಿ, ಗಿರೀಶ ಬಿ., ಮಂಜಪ್ಪ, ರಮೇಶ, ರಾಘವೇಂದ್ರ, ಬಸವರಾಜ, ರಾಮಣ್ಣ ಸೇರಿದಂತೆ ಇನ್ನೂ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net