ಭುವನೇಶ್ವರಿ ಭಾವಚಿತ್ರ ಮೆರವಣಿಗೆ ನಾಡಿದ್ದು

dubai kannada flag
Published on

ನರಗುಂದ: ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ ಆಶ್ರಯದಲ್ಲಿ ನ.1ರಂದು ಬೆಳಗ್ಗೆ 11 ಗಂಟೆಗೆ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ಗಂಟೆಗೆ ನಗರದ ಬಸವೇಶ್ವರ ಸಮುದಾಯ ಭವನದಿಂದ ಪುರಸಭೆ ಆವರಣದ ವರೆಗೆ ಭುವನೇಶ್ವರಿ ಭಾವಚಿತ್ರದ ಪೂಜೆ, ಮೆರವಣಿಗೆಗೆ ಚಾಲನೆ ನೀಡಲಾಗುವುದು. ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು. ನಿವೃತ್ತ ಶಿಕ್ಷಕ ಎಚ್.ಎ. ಮುದಿಯಪ್ಪನವರ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net