

ಗಜೇಂದ್ರಗಡ: ಪಟ್ಟಣದ ಎಸ್.ಎಂ. ಭೂಮರಡ್ಡಿ ಪದವಿಪೂರ್ವ ಮಹಾವಿದ್ಯಾಲಯ 2024-25ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗ: ಗುಡ್ಡಗಾಡು ಓಟದಲ್ಲಿ ಮಹೇಶ ಹೊಸಮನಿ ದ್ವಿತೀಯ, ಮೇಘರಾಜ ಲಮಾಣಿ ಐದನೇ, 3000 ಮೀ ಓಟದಲ್ಲಿ ಮೇಘರಾಜ ಮೇಟಿ ಪ್ರಥಮ, 1500 ಮೀಟರ್ ಓಟದಲ್ಲಿ ನೀಲಪ್ಪ ಜಗ್ಲರ್ ದ್ವಿತೀಯ ಹಾಗೂ ಚಕ್ರ ಎಸೆತದಲ್ಲಿ ಶ್ರೀಧರ ಮಾದರ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ವಿಭಾಗ: ಜ್ಯೋತಿ ಖಾಟಿ ಗುಂಡು ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಹ್ಯಾಮರ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. 3000 ಮೀಟರ್ ನಡಿಗೆಯಲ್ಲಿ ಲಲಿತಾ ಕತ್ತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಪಟುಗಳಿಗೆ ಗವಿವ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗ ಕ್ರೀಡಾಪಟುಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.