ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ

Bhumi Pooja of Civic Facility Hostel
Published on

ವಿಜಯಪುರ: ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ 2024&25 ನೇ ಸಾಲಿನ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಅ. 27 ರಂದು ಬೆಳಗ್ಗೆ 9.30 ಕ್ಕೆ ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಶಂಕುಸ್ಥಾಪನೆ ನೆರವೇರಿಸುವರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು. ರಾಜ್ಯಸಭಾ ಸಂಸದೆ ಡಾ. ಸುಧಾಮೂರ್ತಿ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ, ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಯಮಿತದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಪ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್​. ಪೂಜಾರಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್​ ಮಹೇಜಬಿನ್​ ಹೊರ್ತಿ, ವಿಡಿಎ ಅಧ್ಯಕ್ಷ ಕನಾನ್​ ಮುಶ್ರೀಫ್​ ಭಾಗವಹಿಸುವರು. ಜಿಲ್ಲಾಧಿಕಾರಿ ಟಿ. ಭೂಬಾಲನ್​, ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಪ್ರಸನ್ನ ದೇಸಾಯಿ ಉಪಸ್ಥಿತಿ ವಹಿಸುವರು ಎಂದು ಜಿಲ್ಲಾ ಶಸಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net