ಬಂಟರ ಕ್ರೀಡೋತ್ಸವಕ್ಕೆ ಭೂಮಿಪೂಜೆ

banta
ಅಂತಾರಾಜ್ಯ ಬಂಟ ಕ್ರೀಡೋತ್ಸವ-2024ರ ಪೂರ್ವಭಾವಿಯಾಗಿ ಚಂದ್ರಹಾಸ್ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಬಂಟರ ಸಂಘ ವತಿಯಿಂದ ಡಿ.29ರಂದು ಆಯೋಜಿರುವ ಎಂಆರ್‌ಜಿ ಟ್ರೋಫಿ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024ರ ಪೂರ್ವಭಾವಿಯಾಗಿ ಉದ್ಯಮಿ ಚಂದ್ರಹಾಸ್ ಶೆಟ್ಟಿ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಪಡುಬಿದ್ರಿ ಬಂಟರ ಸಂಘ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಶುಭಹಾರೈಸಿದರು. ಪ್ರಮುಖರಾದ ಎರ್ಮಾಳು ಶಶಿಧರ್ ಶೆಟ್ಟಿ, ಗುಂಡ್ಲಾಡಿ ಸುರೇಶ್ ಶೆಟ್ಟಿ ಮತ್ತು ನವೀನ್‌ಚಂದ್ರ ಜೆ. ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು, ರವಿ ಶೆಟ್ಟಿ ಗುಂಡ್ಲಾಡಿ, ಜ್ಯೋತಿ ಶೆಟ್ಟಿ ಎರ್ಮಾಳು, ನವೀನ್ ಎನ್. ಶೆಟ್ಟಿ, ವಿನಯ ಶೆಟ್ಟಿ, ಶರತ್ ಶೆಟ್ಟಿ, ಸಹ ಹರೀಶ್ ಶೆಟ್ಟಿ ಅವರಾಲು ಮತ್ತು ಸುನೀಲ್ ಶೆಟ್ಟಿ, ಶರ್ಮಿಳಾ ಆರ್.ಶೆಟ್ಟಿ, ಹರೀಶ್ ಶೆಟ್ಟಿ ಪಾದೆಬೆಟ್ಟು, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಮಾಧವ ಸಿ. ಶೆಟ್ಟಿ, ಜಯಾ ಶೆಟ್ಟಿ ಪದ್ರ, ಸುಧಾಕರ ಶೆಟ್ಟಿ, ಶೋಭಾ ಜೆ. ಶೆಟ್ಟಿ, ಅಕ್ಷತಾ ಶೆಟ್ಟಿ, ರಾಧೇಶ್ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net