ಬಿಎಸ್‌ಎನ್‌ಎಲ್ ಟವರ್ ನಿರ್ಮಾಣಕ್ಕೆ ಭೂಮಿಪೂಜೆ

25 Spt 01
ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಯನ್ನು ಸಂಸದ ಪ್ರತಾಪ್ ಸಿಂಹ ವೀಕ್ಷಣೆ ಮಾಡಿದರು. ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಗೀತಾ, ಮಹೇಶ್, ರಾಬಿನ್, ಭಾರತೀಶ್ ಇದ್ದರು.
Published on

ಸೋಮವಾರಪೇಟೆ: ತಾಲೂಕಿನ ಯಡವನಾಡು ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಟವರ್ ನಿರ್ಮಾಣಕ್ಕೆ ಸಂಸದ ಪ್ರತಾಪ್ ಸಿಂಹ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಕೊಡಗಿನಲ್ಲಿ ಒಟ್ಟು 63 ಕಡೆಗಳಲ್ಲಿ ನೂತನ ಬಿಎಸ್‌ಎನ್‌ಎಲ್ ಟವರ್ ನಿರ್ಮಾಣವಾಗಲಿದೆ. ಈಗಾಗಲೇ 20 ಕಾಮಗಾರಿಗಳು ಪ್ರಾರಂಭವಾಗಿವೆ. ಮಾರ್ಚ್‌ನಲ್ಲಿ ಎಲ್ಲ ಟವರ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಸೇವೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದರು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಯನ್ನು ಸಂಸದರು ಪರಿಶೀಲಿಸಿದರು. ಸುಮಾರು 1.9 ಕೋಟಿ ರೂ. ವೆಚ್ಚದಲ್ಲಿ ಚೆಕ್‌ಡ್ಯಾಂ ಹಾಗೂ ಜಾಕ್‌ವೆಲ್ ನಿರ್ಮಿಸಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದರು.

ಜೂನಿಯರ್ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಟರ್ಫ್ ಮೈದಾನ ಕಾಮಗಾರಿಯನ್ನು ಸಂಸದರು ಪರಿಶೀಲಿಸಿದರು. ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರ ಪ್ರಯತ್ನದ ಫಲವಾಗಿ ಮೈದಾನ ನಿರ್ಮಾಣಗೊಂಡಿದ್ದು, ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಿಸಿದರು.

ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಜಿಪಂ ಮಾಜಿ ಸದಸ್ಯ ಬಿ.ಬಿ.ಭಾರತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪ್ರಮುಖರಾದ ಎಚ್.ಕೆ.ಮಾದಪ್ಪ, ಇಂಜಿನಿಯರ್ ಟಿ.ಪಿ.ವೀರೇಂದ್ರ, ಚೌಡ್ಲು ಗ್ರಾಪಂ ಅಧ್ಯಕ್ಷೆ ಗೀತಾ ಶಶಿಕುಮಾರ್, ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net