ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

14arsph1ep
Published on

ಅರಸೀಕೆರೆ: ತಾಲೂಕಿನ ಬಾಣಾವರ ಗ್ರಾಮದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೂಮಿಪೂಜೆ ನೆರವೇರಿಸಿದರು.


ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಮನಗಂಡು ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದ್ದು, ಕೆಲಸ ಪ್ರಗತಿಯಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಾಲೇಜುಗಳ ಪ್ರಾರಂಭವಾಗುವ ಸಾಧ್ಯತೆ ಇದೆ. ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಕಟ್ಟಡಗಳ ಅವಶ್ಯಕತೆ ಇದ್ದು, ಬಾಣಾವರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರ ನೀಡುವ ಸವಲತ್ತನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಶಿವಲಿಂಗೇಗೌಡ ಹೇಳಿದರು.


ಬಾಣಾವಾರ ಗ್ರಾ.ಪಂ. ಅಧ್ಯಕ್ಷೆ ವೀಣಾ ಸುರೇಶ್, ಉಪಾಧ್ಯಕ್ಷೆ ನೇತ್ರಾ ಮಂಜುನಾಥ್, ತಾಪಂ ಮಾಜಿ ಸದಸ್ಯ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net